DAKSHINA KANNADA
ಬೈಕುಗಳ ಪರಸ್ಪರ ಢಿಕ್ಕಿ : ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಬೈಕುಗಳ ಪರಸ್ಪರ ಢಿಕ್ಕಿ : ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಪುತ್ತೂರು, ಡಿಸೆಂಬರ್ 02 : ಬೈಕ್ ಗಳೆರಡು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಒರ್ವ ಕಾಲೇಜು ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸವಣೂರು ಸಮೀಪದ ಕೊಡ್ನೀರು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸಾವಿಗೀಡಾದ ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಅನಾಝ್ ಎಂದು ಗುರುತ್ತಿಸಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿರ್ಲಕ್ಷ ಹಾಗೂ ಅತೀ ವೇಗದ ಚಾಲನೆ ಬೈಕ್ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ಪುತ್ತೂರು ಸ್ಥಳೀಯ ಪೋಲಿಸ್ ಅಧಿಕಾರಿಗಳು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
You must be logged in to post a comment Login