Connect with us

    LATEST NEWS

    ಜನವರಿ 6 ರಿಂದ ಕುದ್ರೋಳಿಯಿಂದ ಬಿಲ್ಲವರ ಪಾದಯಾತ್ರೆ ಆರಂಭ

    ಮಂಗಳೂರು ಜನವರಿ 4: ಮಂಗಳೂರುಃ ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರಕಾರವನ್ನು ಒತ್ತಾಯಿಸಿ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೂಜ್ಯರಾದ ಡಾ. ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿರುವ 41 ದಿನಗಳ ಐತಿಹಾಸಿಕ ಪಾದಯಾತ್ರೆ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಜನವರಿ 6 ರಂದು ಆರಂಭವಾಗಲಿದೆ.


    658 ಕಿಮೀ ಹಾದಿಯ ಪಾದಯಾತ್ರೆಗೆ ಈಡಿಗ ಬಿಲ್ಲವ ಸಮುದಾಯದ ಮಹಾನ್ ನಾಯಕ, ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ದನ ಪೂಜಾರಿ, ತೆಲಂಗಾಣ ಸರಕಾರದ ಅಬಕಾರಿ ಹಾಗು ಪ್ರವಾಸೋದ್ಯಮ ಖಾತೆ ಸಚಿವ ಶ್ರೀನಿವಾಸ ಗೌಡ್ ಅವರು ಚಾಲನೆ ನೀಡಲಿರುವರು. ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೂಜ್ಯರಾದ ಡಾ. ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಐತಿಹಾಸಿಕ ಪಾದಯಾತ್ರೆ ನಡೆಯಲಿದ್ದು, ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ರಚನೆ ಮಾಡಿ 5೦೦ ಕೋಟಿ ರೂ ಅನುದಾನ ಮಂಜೂರು ಮಾಡಬೇಕು, ಕುಲಕಸುಬು ಸೇಂದಿ ನಿಷೇಧ ರದ್ದುಪಡಿಸಬೇಕು ಅಥವ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು, ಈಡಿಗ ಸಮುದಾಯದ ಧರ್ಮದರ್ಶಿ ಶ್ರೀ ರಾಮಪ್ಪಜ್ಜ ಆಡಳಿತದ ಸಿಗಂದೂರು ಶ್ರೀ ಚೌಡೇಶ್ವರಿ ಕ್ಷೇತ್ರದಲ್ಲಿ ಸರಕಾರದ ಹಸ್ತಕ್ಷೇಪ ನಿಲ್ಲಿಸಬೇಕು, ಸಾರಾಯಿ ಹಾಗೂ ಸೇಂದಿ ನಿಷೇಧದಿಂದ ನಿರ್ಗತಿಕರಾದ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಮೂರು ವರ್ಷಗಳಿಂದ ಸರಕಾರವನ್ನು ಒತ್ತಯಿಸಲಾಗುತ್ತಿದೆ.


    ಇದರೊಂದಿಗೆ ಬಿಲ್ಲವ ಈಡಿಗರ ಜನಸಂಖ್ಯೆ ಹೆಚ್ಚಿರುವ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ,ರಾಯಚೂರು,ಬೀದರ್, ಗುಲ್ಬರ್ಗ ಜಿಲ್ಲೆಗಳಲ್ಲಿ ಹೆಚ್ಚಿನ ರಾಜಕೀಯ ಪ್ರಾತಿನಿತ್ಯ ನೀಡಬೇಕು ಎಂದು ಕೂಡ ಬೇಡಿಕೆ ಇರಿಸಲಾಗಿದೆ.
    ಈಗಾಗಲೇ 2ಎಯಲ್ಲಿ ಮೀಸಲಾತಿ ಹೊಂದಿರುವ ಕುರುಬ, ಈಡಿಗ, ಕುಂಬಾರ ಸೇರಿದಂತೆ 102 ಕಾಯಕ ಸಮುದಾಯದ ಜನರಿಗೆ ಮೀಸಲಾತಿಯಲ್ಲಿ ಯಾವುದೇ ತೊಂದರೆ ಆಗಬಾರದು ಎಂದು ಸರಕಾರವನ್ನು ಎಚ್ಚರಿಸಲು ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಡಾ. ಪ್ರಣವಾನಂದ ಸ್ವಾಮೀಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಂಗಳೂರಿನಿಂದ ಉಡುಪಿ, ಶಿವಮೊಗ್ಗ, ದಾವಣಗೆರೆ,ಚಿತ್ರದುರ್ಗ,ತುಮಕೂರು ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲಪುವ ಪಾದಯಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಜನರು ಭಾಗವಹಿಸಲಿದ್ದಾರೆ.

    ಜ.6ರಂದು ಶುಕ್ರವಾರ ಮಂಗಳೂರಿನ ಶ್ರೀ ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ಐತಿಹಾಸಿಕ ಪಾದಯಾತ್ರೆಯ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಧ್ಯಾಹ್ನ ಕುದ್ರೋಳಿಯಿಂದ ಪಾದಯಾತ್ರೆ ಹೊರಡಲಿದೆ.ಮೊದಲ ದಿನ ಕುಳಾಯಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮರುದಿನ ಬೆಳಗ್ಗೆ ಕುಳಾಯಿ ಪುನಾರಂಭವಾಗುವ ಪಾದಯಾತ್ರೆ ಅಂದು ಸಂಜೆ ಹೆಜಮಾಡಿ ತಲುಪಲಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *