Connect with us

    LATEST NEWS

    ಕೊಣಾಜೆ – ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರ್ ಬೀಸಿದ ದುಷ್ಕರ್ಮಿಗಳು…!!

    ಮಂಗಳೂರು ಅಕ್ಟೋಬರ್ 19: ಬಿಜೆಪಿ ಕಾರ್ಯಕರ್ತನ ಮೇಲೆ ಮೂವರ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ನಡೆಸಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.


    ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಬಳಿ ಬೈಕ್ ನಲ್ಲಿ ಬಂದ ಮೂವರು ಅಪರಿಚಿತರ ತಂಡವೊಂದು ಬೈಕಲ್ಲಿ ಬಂದು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಸ್ನೇಹಿತ ಮಂಜುನಾಥ್ ಜೊತೆಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಪವಾಡಸದೃಶವಾಗಿ ತಲವಾರು ದಾಳಿ ಕೈಗೆ ಮಾತ್ರ ಬಿದ್ದಿದೆ. ಗಾಯಾಳು ಪ್ರಕಾಶ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


    ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕ ಉಸ್ಮಾನ್ ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply