KARNATAKA
ಈ ಬಾರಿ ನಮಗೆ ಶೋಭಾ ಕರಂದ್ಲಾಜೆ ಬೇಡ್ವೇ ಬೇಡ,ಸ್ವಕ್ಷೇತ್ರದಲ್ಲೇ ಸಚಿವೆ ವಿರುದ್ದ ಕಾರ್ಯಕರ್ತರ ರಣಕಹಳೆ..!
ಚಿಕ್ಕಮಗಳೂರು: ಲೋಕಾಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಟಿಕೆಟ್ ನೀಡುವ ವಿಚಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಸ್ಥಾನಕ್ಕೆ ಈ ಬಾರಿ ಶೋಭಾಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಪತ್ರ ಅಭಿಯಾನ ಆರಂಭಿಸಿದ್ಧಾರೆ. ಪ್ರಧಾನಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಪತ್ರ ಬರೆದು ಚಳವಳಿ ಆರಂಭಿಸಿದ್ದಾರೆ. ಎರಡು ಬಾರಿ ಸಂಸದೆಯಾಗಿ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಅವರಿಗೆ ಈ ಬಾರಿ ಟಿಕೆಟ್ ಬೇಡ ಎಂದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುಮಾರು 5 ಸಾವಿರಕ್ಕೂ ಅಧಿಕ ಪತ್ರಗಳನ್ನು ಕಾರ್ಯಕರ್ತರು ಬರೆದು ಪೋಸ್ಟ್ ಮಾಡಿದ್ದಾರೆ. ಇದೇ ವೇಳೆ ಉತ್ತಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಚಾರಕ್ಕೆ ಆಗಮಿಸಿಲ್ಲ ಎಂಬುವುದು ಕಾರ್ಯಕರ್ತರ ಅಸಮಾಧಾನಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು ಎನ್ನಲಾಗಿದೆ. ಈ ಕಾರಣಕ್ಕೆ ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಕಾಂಗ್ರೆಸ್ ವಶವಾಗಿತ್ತು.