LATEST NEWS
10 ವರ್ಷಗಳ ನಂತರ ಪಂಪ್ ವೆಲ್ ಪ್ಲೈಓವರ್ ಗಾಗಿ ಪ್ರತಿಭಟನೆಗೆ ಇಳಿದ ಬಿಜೆಪಿ

10 ವರ್ಷಗಳ ನಂತರ ಪಂಪ್ ವೆಲ್ ಪ್ಲೈಓವರ್ ಗಾಗಿ ಪ್ರತಿಭಟನೆಗೆ ಇಳಿದ ಬಿಜೆಪಿ
ಮಂಗಳೂರು ಜನವರಿ 1: ಪಂಪ್ ವೆಲ್ ಪ್ಲೈಓವರ್ ಕಾಮಗಾರಿ ಪೂರ್ಣಗೊಳಿಸದ ಹಿನ್ನಲೆ ಬಿಜೆಪಿ ಶಾಸಕರ ನೇತೃತದಲ್ಲಿ ತಲಪಾಡಿಯಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕೆಂದು ಪ್ರತಿಭಟನೆ ನಡೆಯುತ್ತಿದೆ. ಶಾಸಕರಾದ ಡಿ.ವೇದವ್ಯಾಸ ಕಾಮತ್ ಮತ್ತು ಡಾ.ವೈ.ಭರತ್ ಶೆಟ್ಟಿ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ವಾಹನ ಸವಾರರಿಂದ ಟೋಲ್ ಸಂಗ್ರಹಿಸದಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ಕಾಮಗಾರಿ ನವಯುಗ ಕಂಪೆನಿ ವಹಿಸಿಕೊಂಡಿದ್ದು, ಕಳೆದ 10 ವರ್ಷಗಳಿಂದ ಕಾಮಗಾರಿ ನಡೆಸುತ್ತಿದ್ದರೂ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಈ ನಡುವೆ 5 ಬಾರಿ ಕಂಪೆನಿಯೇ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಡೆಡ್ ಲೈನ್ ನೀಡಿತ್ತು. ಆದರೂ ಅದನ್ನು ಪಾಲಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಈಗ ಬಿಜೆಪಿ ಶಾಸಕರು ಪ್ರತಿಭಟನೆಗೆ ಇಳಿದಿದ್ದಾರೆ.

ಇಂದು ಬೆಳಿಗ್ಗೆಯಿಂದಲೇ ಮಂಗಳೂರು ಕೇರಳ ಗಡಿಭಾಗದ ತಲಪಾಡಿ ಟೋಲ್‌ಗೇಟ್ ನಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.
ಸದ್ಯ ಕೇರಳ ಮತ್ತು ಮಂಗಳೂರು ನಡುವೆ ಸಂಚರಿಸುತ್ತಿರುವ ವಾಹನಗಳಿಂದ ಟೋಲ್ ಸಂಗ್ರಹಿಸುವುದನ್ನು ಸ್ಥಗಿತಗೊಳಿಸಲಾಗಿದೆ. ವಾಹನ ಸವಾರರು ಟೋಲ್ ಪಾವತಿಸದೇ ಸಂಚರಿಸುತ್ತಿದ್ದಾರೆ.
ಕಳೆದ 10 ವರ್ಷಗಳಿಂದ ಕಾಮಗಾರಿ ಕುಂಟುತ್ತಾ ಸಾಗಿದರೂ ನೆನಪಾಗದ ಬಿಜೆಪಿ ಶಾಸಕರಿಗೆ.. ಕಾಮಾಗಾರಿ ಬಹುತೇಕ ಮುಗಿಯುವ ಹಂತಕ್ಕೆ ಬಂದಿರುವ ಸಂದರ್ಭ ಪ್ರತಿಭಟನೆಗೆ ಇಳಿಯುಲು ಹೊರಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.