DAKSHINA KANNADA
ಬೈಕ್ ರಾಲಿ ನಿಶ್ಟಿಯಿಸಿದಂತೆ ನಡೆಯುವುದು- ಅರವಿಂದ ಲಿಂಬಾವಳಿ

ಮಂಗಳೂರು,ಸೆಪ್ಟಂಬರ್ 6 : ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಾಳೆ ಹಮ್ಮಿಕೊಂಡಿರುವ ಮಂಗಳೂರು ಚಲೋ ರಾಲಿಯನ್ನು ಪೊಲೀಸ್ ಪೋರ್ಸ್ ಬಳಸಿ ತಡೆಯುತ್ತಿದ್ದು, ಮಂಗಳೂರು ಚಲೋ ಕಾರ್ಯಕ್ರಮ ನಡೆಯುತ್ತದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಜ್ಯೋತಿ ವ್ರತ್ತದಿಂದ ಬೈಕ್ ರಾಲಿ ಅರಂಭಗೊಳ್ಳಲಿದೆ. ಜಿಲ್ಲಾಧಿಕಾರಿ ತನಕ ತೆರಳಲಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬ್ರಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದರು. ಸುಮಾರು ಸಾವಿರಕ್ಕಿಂತ ಹೆಚ್ಚು ಬೈಕ್ ಗಳು ಹಾಗೂ ಐದು ಸಾವಿರಕ್ಕಿಂತ ಹೆಚ್ಚು ಜನ ಈ ರಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ರಾಲಿಯ ನೇತೃತ್ವ ವಹಿಸಲಿದ್ದಾರೆ ಎಂದರು. ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಮುಖಂಡರೂ ಈ ಸಬೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.