DAKSHINA KANNADA
ಉಡುಪಿ ಸಂಸದ ಕೋಟರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್..!
ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಘೋಷಿತರಾದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ರವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ (kota sinivas poojary) ಅವರನ್ನು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ರವರನ್ನು ಶಾಲು ಹೊದಿಸಿ ಅಭಿನಂದಿಸಿದ ಸಂಸದ ಕೋಟ ಗೆಲುವಿಗಾಗಿ ಶುಭ ಹಾರೈಸಿ ತಮ್ಮ ಪರವಾಗಿ ನಿರಂತರ ಕೆಲಸ ಮಾಡಿ ಗೆಲ್ಲಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಹ ಪ್ರಭಾರಿ ರಾಜೇಶ್ ಕಾವೇರಿ, ದಕ್ಷಿಣ ಕನ್ನಡ ಯುವ ಮೋರ್ಚಾ ಉಪಾಧ್ಯಕ್ಷರಾದ ಆಶ್ರಿತ್ ನೋಂಡ ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.
You must be logged in to post a comment Login