LATEST NEWS
ಗಂಜಿಮಠದಲ್ಲಿರುವ ಬಿಗ್ ಬ್ಯಾಗ್ ಸಂಸ್ಥೆಯ ನೌಕರರೊಡನೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಮತಯಾಚನೆ

ಗಂಜಿಮಠದಲ್ಲಿರುವ ಬಿಗ್ ಬ್ಯಾಗ್ ಸಂಸ್ಥೆಯ ನೌಕರರೊಡನೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಮತಯಾಚನೆ
ಮಂಗಳೂರು ಎಪ್ರಿಲ್ 5 : ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರ ತೋಡಗಿದೆ. ಈಗಾಗಲೇ ವಿವಿಧ ಪಕ್ಷಗಳ ಮುಖಂಡರು ಮತ ಯಾಚನೆ ಯಲ್ಲಿ ತೊಡಗಿದ್ದಾರೆ. ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಈಗಾಗಲೇ ಮತಯಾಚನೆಯಲ್ಲಿ ತೊಡಗಿದ್ದು ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತ ಯಾಚನೆ ಮಾಡಿದರು.
ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಗಂಜಿಮಠದಲ್ಲಿರುವ ಬಿಗ್ ಬ್ಯಾಗ್ ಸಂಸ್ಥೆಯ ನೌಕರರೊಡನೆ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ, ಶಾಸಕ ರಾಜೇಶ್ ನೈಕ್ ಉಳಿಪ್ಪಾಡಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಸಂಚಾಲಕ ರಣದೀಪ್ ಕಾಂಚನ್, ಸೇರಿದಂತೆ ಆನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
