Connect with us

LATEST NEWS

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಗೆಲವು

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಗೆಲವು

ಮಂಗಳೂರು ಮೇ 23: ಬಿಜೆಪಿಯ ಭದ್ರಕೋಟೆ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಸಫಲವಾಗಿದ್ದು, ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಭಾರಿ ಅಂತರದಲ್ಲಿ ಗೆಲುವನ್ನು ಸಾಧಿಸಿ ಸತತ ಮೂರನೇ ಬಾರಿ ಸಂಸತ್ ಪ್ರವೇಶಿಸಿದ್ದಾರೆ.

ಈಗಾಗಲೇ 2 ಬಾರಿ ಸಂಸದ ಪ್ರವೇಶಿಸಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಈ ಬಾರಿ ಮತ್ತೆ 3 ನೇ ಗೆಲುವು ಸಾಧಿಸಿದ್ದಾರೆ. ನಳಿನ್ ಎದುರಾಳಿ ಕಾಂಗ್ರೇಸ್ ನ ಯುವ ನಾಯಕ ಮಿಥುನ್ ರೈ ಎದುರು ಸುಮಾರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲವನ್ನು ಸಾಧಿಸಿದ್ದಾರೆ.

ಮತ ಎಣಿಕೆ ಪ್ರಾರಂಭದಿಂದಲೇ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಭಾರಿ ಅಂತರವನ್ನು ಕಾಯ್ದುಕೊಂಡಿದ್ದರು. ಈ ಮೂಲಕ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಭಾರಿ ಗೆಲುವನ್ನು ಕಂಡಿದ್ದು, ಸತತ ಮೂರನೇ ಬಾರಿ ಸಂಸತ್ ಪ್ರವೇಶಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ ಮುಗಿಲು ಮುಟ್ಟಿದ್ದು , ಬಿಜೆಪಿ ಚುನಾವಣೆ ಕಚೇರಿ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ವಿಜಯೋತ್ಸವ ಆಚರಿಸಲಾಗುತ್ತಿದೆ.

VIDEO

Share Information
Continue Reading
Advertisement
Click to comment

Leave a Reply

Your email address will not be published. Required fields are marked *