Connect with us

    BANTWAL

    ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅಯ್ಕೆ

    ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅವರನ್ನು ಅಯ್ಕೆ ಮಾಡಲಾಗಿದೆ.

    ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಅವರು ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
    ಆರ್.ಎಸ್. ಎಸ್. ಕಾರ್ಯಕರ್ತನಾಗಿ ಸೇವೆ ಮಾಡಿದ ಕೋಟ್ಯಾನ್ ಅಬಳಿಕ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ವಿವಿಧಮಜಲುಗಳಲ್ಲಿ ಕೆಲಸ ಮಾಡಿದ ಓರ್ವ ಅನುಭವಿಯನ್ನು ಮಂಡಲದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ತಾ.ಪಂ.ಸದಸ್ಯರಗಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ, ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ,ಜಿ.ಪಂ‌ಸದಸ್ಯರಾಗಿ,ಕಲ್ಲಡ್ಕ ಶ್ರೀರಾಮ ಮಂದಿರದ ಅಧ್ಯಕ್ಷರಾಗಿ, ಪೂರ್ಲಿಪಾಡಿ ಶ್ರೀ ಅಣ್ಣಪ್ಪ ಪಂಜುರ್ಲಿ ಮಹಮ್ಮಾಯಿ ಅಮ್ಮನವರ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ, ಶ್ರೀ ರಾಮ‌ವಿದ್ಯಾಕೇಂದ್ರದ ಅಡಳಿತ ಮಂಡಳಿಲ ಸದಸ್ಯ ರಾಗಿ ಅನುಭವ ಹೊಂದಿದ ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದಾರೆ.  1990 ನೇ ಇಸವಿಯಲ್ಲಿ ಮುಲಾಯಂಸಿಂಗ್ ಸರಕಾರದ ಸಮಯದಲ್ಲಿ ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply