DAKSHINA KANNADA
ಮಂಗಳೂರು – ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನ ಅಂಗವಾಗಿ ಬಿಜೆಪಿ ವತಿಯಿಂದ ಪೂಜೆ

ಮಂಗಳೂರು ಫೆಬ್ರವರಿ 27: ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರ ಜನ್ಮದಿನದ ಅಂಗವಾಗಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕಂಕನಾಡಿ ಇಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸನ್ಮಾನ್ಯ ಯಡಿಯೂರಪ್ಪನವರು ಈ ನಾಡು ಕಂಡ ಧೀಮಂತ ನಾಯಕ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ಮಹತ್ತರವಾದುದು. ಬಡ ಹಾಗೂ ಮಧ್ಯಮ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಅವರ ಅಧಿಕಾರವಧಿಯಲ್ಲಿ ಜಾರಿಯಾದ ಅನೇಕಾರು ಯೋಜನೆಗಳು ಇಂದಿಗೂ ಜನಮಾನಸದಲ್ಲಿ ನೆಲೆಸಿವೆ. ಎಲ್ಲ ಸಂಕಷ್ಟಗಳ ನಡುವೆಯೂ ರಾಜ್ಯವನ್ನು ಅಭಿವೃದ್ಧಿಯ ಶಕೆಯೆಡೆಗೆ ಕೊಂಡೊಯ್ದ ಶ್ರೇಷ್ಠ ನಾಯಕನಿಗೆ ಇನ್ನೂ ಅನೇಕ ವರ್ಷಗಳ ಕಾಲ ಆಯುರಾರೋಗ್ಯ ಕರುಣಿಸಿ ನಾಡಿನ ಸೇವೆ ಮಾಡುವ ಚೈತನ್ಯ ದಯಪಾಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ವಸಂತ ಪೂಜಾರಿ, ಜಯ ಕುಮಾರ್, ಚಂದ್ರಶೇಖರ್, ವರುಣ್ ಅಂಬಟ್, ಚರಿತ್ ಪೂಜಾರಿ, ಭಾಸ್ಕರ ಚಂದ್ರ ಶೆಟ್ಟಿ, ಪ್ರಕಾಶ್ ಗರೋಡಿ, ಸಹಿತ ಅನೇಕ ಬಿಜೆಪಿ ಮುಖಂಡರುಗಳು ಭಾಗವಹಿಸಿದ್ದರು.