DAKSHINA KANNADA
ಪಯಸ್ವಿನಿ ಹೊಳೆಯಲ್ಲಿ ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಮೃತದೇಹ ಪತ್ತೆ
ಸುಳ್ಯ ಮೇ 18: ಬಿಜೆಪಿ ಮುಖಂಡರೊಬ್ಬರ ಮೃತದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಎಂದು ಗುರುತಿಸಲಾಗಿದೆ.
ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ಮೇಲೆತ್ತಲಾಗಿದೆ ಎಂದು ಹೇಳಲಾಗಿದೆ.
ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್ ರೈ ಮೇನಾಲ ಬಿಜೆಪಿಯ ಹಿರಿಯ ಮುಖಂಡರಾಗಿದ್ದರು.