LATEST NEWS
ಬೈಂದೂರು – ಮಾಜಿ ಶಾಸಕ ಬಿಜೆಪಿ ಹಿರಿಯ ಮುಖಂಡ ಕೆ. ಲಕ್ಷ್ಮೀ ನಾರಾಯಣ ನಿಧನ
ಕುಂದಾಪುರ ಸೆಪ್ಟೆಂಬರ್ 27: ಬೈಂದೂರಿನ ಮಾಜಿ ಶಾಸಕ ಬಿಜೆಪಿಯ ಹಿರಿಯ ಮುಖಂಡ ಕೆ. ಲಕ್ಷ್ಮೀ ನಾರಾಯಣ (85) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.
ಇವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು.