ಮಂಗಳೂರು ಡಿಸೆಂಬರ್ 29: ಮಗ ಮಾಡಿದ ತಪ್ಪಿನಿಂದಾಗಿ ಪುತ್ತೂರಿನ ಬಿಜೆಪಿ ನಾಯಕ ಜಗನ್ನಿವಾಸ್ ರಾವ್ ಅವರನ್ನು ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ. ಈ ಕುರಿತಂತೆ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಜಗನ್ನಿವಾಸ ರಾವ್ ಪುತ್ರನ ವಂಚನೆ ಪ್ರಕರಣ ಬೆಳಕಿಗೆ ಬಂದ ತಕ್ಷಣ ಅವರಿಗೆ ನೋಟಿಸ್ ನೀಡಿ ಅವರನ್ನು ಪಕ್ಷದಿಂದ ದೂರ ಇಟ್ಟಿದ್ದೆವು. ಆಗ ಅವರು ಕಾನೂನಾತ್ಮವಾಗಿ, ಡಿಎನ್‌ಎ ಪರೀಕ್ಷೆಯಲ್ಲಿ ಸಾಬೀತಾದರೆ ತೊಂದರೆಗೊಳಗಾದ ಯುವತಿಯೊಂದಿಗೆ ಮಗನ ಮದುವೆ ಮಾಡಿಸುವುದಾಗಿ ಜಗನ್ನಿವಾಸ ರಾವ್ ನಮ್ಮಲ್ಲಿ ಹೇಳಿದ್ದರು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಲ್ಲೂ ಭರವಸೆ ನೀಡಿದ್ದರು. ಆದರೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ಜಗನ್ನಿವಾಸ ರಾವ್ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ. ಯುವತಿಗೆ ನ್ಯಾಯ ದೊರಕಿಸಿಕೊಡುವ ತನಕ ಪ್ರಯತ್ನ ಮುಂದುವರಿಸುವುದಾಗಿ ಹೇಳಿದರು.



