Connect with us

DAKSHINA KANNADA

ಬಿಜೆಪಿ ನಾಯಕ ಮಾಜಿ ಸಿಎಂ ಡಿವಿ ಸದಾನಂದ ಗೌಡ ಚುನಾವಣಾ ಕಣದಿಂದ ನಿವೃತ್ತಿ..!?

ಪುತ್ತೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದ ಗೌಡ ಮುಂಬರುವ ಲೋಕಾಸಭಾ ಚುನಾವಣೆಯ ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದಾರೆ.

ಕಳೆದ ವಾರದ ದೆಹಲಿ ಪಕ್ಷದ ವರಿಷ್ಟರ ಬುಲಾವ್ ಬಂದ ಹಿನ್ನೆಲೆಯಲ್ಲಿ ದೆಹಲಿ ಹೋಗಿದ್ದ ಡಿವಿ ಸದಾನಂದ ಗೌಡರಿಗೆ ಮುಂಬರುವ ಲೋಕಸಭಾ ಚುನಾವಣಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವಂತೆ ಸೂಚಿಸಿದ್ದು ಇದಕ್ಕೆ ಡಿವಿಎಸ್‌ ಕೂಡ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿರುವ ಡಿವಿಎಸ್‌ ಅವರ ಯಾವಾಗಲೂ ಇದ್ದ ಹಿಂದಿನ ಡ್ರೆಸ್ ಕೋಡ್ ಕೂಡ ಬದಲಾಗಿತ್ತು.

ಇನ್ನು ಈ ಬಗ್ಗೆ ಪ್ರತಿಕ್ರೀಯಿಸಿರುವ ಡಿವಿ ಸದಾನಂದ ಗೌಡರು ಚುನಾವಣಾ ಸ್ಪರ್ಧೆಯಲ್ಲಿ, ಪದವಿಯಲ್ಲಿ ಆಸಕ್ತಿಯಿಲ್ಲ ಎಂದಿದ್ದಾರೆ. ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ,ಕೇಂದ್ರ ಸಚಿವ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ ಆಗಿದ್ದು ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ಮಾತ್ರ ನನಗೆ ಆಸಕ್ತಿ ಮತ್ತು ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದೇ ನನ್ನ ಗುರಿ ಎಂದಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply