DAKSHINA KANNADA
ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಪುತ್ರನ ಲವ್,ಸೆಕ್ಸ್,ಧೋಖಾ ಪ್ರಕರಣ: ಬಿಜೆಪಿಯಿಂದ ಶಿಸ್ತು ಕ್ರಮದ ನೋಟೀಸ್

ಪುತ್ತೂರು, ಜುಲೈ 08: ಬಿಜೆಪಿ ಮುಖಂಡ, ಪುತ್ತೂರು ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ್ ರಾವ್ ಪುತ್ರನ ಲವ್,ಸೆಕ್ಸ್, ಧೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಶಿಸ್ತು ಕ್ರಮದ ಎಚ್ಚರಿಕೆಯ ನೋಟೀಸ್ ನೀಡಲಾಗಿದೆ.
ಪಿ.ಜಿ.ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ನಿಂದ ಯುವತಿಗೆ ವಂಚನೆ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟಾಗಿದೆ. ನಿಮ್ಮ ಮಗ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿ ವಂಚನೆ ಮಾಡಿರುವ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯಾಗುತ್ತಿದೆ. ಸಂತ್ರಸ್ತೆಯ ಪೋಷಕರು ನೀವು ನ್ಯಾಯಸಮ್ಮತವಾಗಿ ನಡೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ತಾವು ಪಕ್ಷದಲ್ಲಿದ್ದು ನ್ಯಾಯಯುತವಾಗಿ, ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿತ್ತು ಸಂತ್ರಸ್ತೆ ಯುವತಿಗೆ ನ್ಯಾಯ ಒದಗಿಸಿಕೊಡಬೇಕು, ಇಲ್ಲದಿದ್ದಲ್ಲಿ ಪಕ್ಷದ ಹಿತದೃಷ್ಟಿಯಿಂದ ನಿಮ್ಮ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ತಕ್ಷಣವೇ ಉತ್ತರಿಸಬೇಕು ಎನ್ನುವ ಎಚ್ಚರಿಕೆಯ ನೋಟೀಸ್ ನೀಡಲಾಗಿದೆ.
1 Comment