LATEST NEWS
ಪಾಕಿಸ್ತಾನ ಪರ ಘೋಷಣೆ – ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು
ಮಂಗಳೂರು, ಫೆಬ್ರವರಿ28: ರಾಜ್ಯಸಭೆ ಚುನಾವಣೆಯ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಲ್ಲಿಕಟ್ಟೆಯಲ್ಲಿ ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಲು ಬಂದಿದ್ದಾರೆ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಸುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು. ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ನಿನ್ನೆ ಸಂಜೆಯ ವೇಳೆಗೆ ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಪರವಾಗಿ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಆರೋಪ ಕೇಳಿಬಂದಿದೆ.