Connect with us

    LATEST NEWS

    ಉಡುಪಿ – 24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಕಠಿಣ ಕ್ರಮ

    ಉಡುಪಿ ಮೇ 23: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಮುಂದಿನ 24 ಗಂಟೆಯೊಳಗೆ ಕಣದಿಂದ ಹಿಂದೆ ಸರಿಯದಿದ್ದರೆ ಪಕ್ಷದ ಶಿಸ್ತು ಉಲ್ಲಂಘಿಸಿದ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.


    ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಘುಪತಿ ಭಟ್ ಅವರ ಗೆಳೆಯನಾಗಿ ಅವರಲ್ಲಿ 24 ಗಂಟೆಯೊಳಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡುತ್ತೇನೆ. ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಇದ್ದರು ಕೂಡ ಅವರ ಮೇಲೆ ಪಕ್ಷ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತದೆ ಎಂದರು. ಇವತ್ತು ಅಥವಾ ನಾಳೆ ರಘುಪತಿ ಭಟ್ ಸ್ಪರ್ಧೆಗೆ ನಿವೃತ್ತಿ ಘೋಷಿಸಬಹುದು ಎಂಬ ವಿಶ್ವಾಸವಿದೆ. ಈ ಬಗ್ಗೆ ಮಾತುಕತೆಯೂ ಮುಂದುವರಿದಿದೆ. ನಿವೃತ್ತಿ ಘೋಷಿಸದಿದ್ದರೆ, ರಘುಪತಿ ಭಟ್ ಅಲ್ಲ, ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *