Connect with us

KARNATAKA

ಕಾರ್ಕಳ ಹಿಂದೂ ಯುವತಿ ಗ್ಯಾಂಗ್‌ರೇಪ್‌ ಪ್ರಕರಣದ ತನಿಖೆ ‘NIA’ ಗೆ ಒಪ್ಪಿಸಲು ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಕುಕ್ಕುಂದೂರು ಅಯ್ಯಪ್ಪ ನಗರ ಗರಡಿ ಬಳಿ ನಡೆದ ಹಿಂದೂ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ( karkala gang rape) ಹಿಂದೆ ಅಂತಾರಾಷ್ಟ್ರೀಯ ಜಿಹಾದಿ ಡ್ರಗ್ಸ್‌ ಜಾಲ ಶಾಮೀಲಾಗಿರುವ ಶಂಕೆ ವ್ಯಕ್ತಪಡಿಸಿದ್ದು ಈ ಪ್ರಕರಣವನ್ನು NIA ತನಿಖೆಗೆ ನೀಡಬೇಕೆಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.


ಈ ಘಟನೆಯಿಂದ ಸಮಾಜದಲ್ಲಿ ಮಹಿಳೆಯರಿಗೆ ಭಯದ ವಾತಾವರಣ ಉಂಟಾಗಿದ್ದು, ಈ ಜಿಹಾದಿ ಕೃತ್ಯವನ್ನು ಎಸಗಿದವರು ಕ್ರಿಮಿನಲ್ ಹಿನ್ನೆಲೆಯವರಾಗಿರುವ ಸಂಶಯವಿದೆ. ಇದೊಂದು ಪೂರ್ವಯೋಜಿತ ಕೃತ್ಯ ಎಂದು ಕಂಡುಬರುತ್ತದೆ. ಈ ಪೈಶಾಚಿಕ ಕೃತ್ಯದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಇದೆ. ಹೀಗಾಗಿ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾದ ತನಿಖೆಗಾಗಿ ಪ್ರಕರಣವನ್ನು ರಾಷ್ಟ್ರೀ ತನಿಖಾ ದಳಕ್ಕೆ (ಎನ್‌ಐಎ)ಗೆ ಒಪ್ಪಿಸಬೇಕೆಂದು ಒತ್ತಾಯಿಸಿದೆ.

ಕಾರ್ಕಳದಲ್ಲಿ ಕಾಲೇಜು ಕ್ಯಾಂಪಸ್‌ಗಳ ವ್ಯಾಪ್ತಿಯಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿರುವ ಬಗ್ಗೆ ಈ ಮೊದಲು ಕೂಡ ಪತ್ರಿಕೆಗಳಲ್ಲಿ ಬಂದಿರುತ್ತದೆ. ಆದರೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳದಿರುವುದು ಖೇದಕರ. ಈ ಬಗ್ಗೆ ಇಲಾಖೆ ಮೊದಲೇ ಎಚ್ಚೆತ್ತುಕೊಳ್ಳುತ್ತಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಪೊಲೀಸ್‌ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಯುವತಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದೆ.

ಇಸ್ಲಾಂ ಮತಾಂತರಕ್ಕೆ ಯತ್ನಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌..!

Share Information
Continue Reading
Advertisement
Click to comment

Leave a Reply

Your email address will not be published. Required fields are marked *