Connect with us

LATEST NEWS

ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿಗೆ ಕೊರೋನಾ

ಮಂಗಳೂರು ಜುಲೈ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಯೊಬ್ಬರಿಗೆ ಕೊರೊನಾ ಸೊಂಕು ತಗುಲಿದೆ. ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೊನಾ ಸೊಂಕು ತಗುಲಿರುವುದನ್ನು ಟ್ವಿಟರ್ ಮೂಲಕ ದೃಢಪಡಿಸಿದ್ದಾರೆ.


ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ದಿನದಿಂದ ದಿನಕ್ಕೆ ಏರಿಕೆ ಹಾದಿಯಲ್ಲಿದ್ದು, ಜಿಲ್ಲೆಯಲ್ಲಿ ಸಮದಾಯ ಹಂತಕ್ಕೆ ತಲುಪಿದೆ ಎನ್ನಲಾಗುತ್ತಿದೆ. ಈ ನಡುವೆ ಜನಪ್ರತಿನಿಧಿಯೊಬ್ಬರಿಗೆ ಕೊರೊನಾ ಸೊಂಕು ಹಬ್ಬಿರುವುದು ಸದ್ಯ ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಸ್ವತಃ ವೈದ್ಯರಾಗಿರುವ ಅವರಿಗೆ ಕೊರೊನಾ ಸೊಂಕು ತಗುಲಿದೆ.

 

ಸೊಂಕಿತರ ಸಂಪರ್ಕದಿಂದ ಸೊಂಕು ತಗುಲಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಸ್ವಯಂ ಪ್ರೇರಿತವಾಗಿ ತಪಾಸಣೆ ನಡೆಸಿದ ಸಂದರ್ಭ ಕೊರೊನಾ ಪತ್ತೆಯಾಗಿದೆ. ಶಾಸಕರು ಮಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

Facebook Comments

comments