Connect with us

KARNATAKA

ಬಿಜೆಪಿಯ 18 ಶಾಸಕರ ಅಮಾನತು ವಾಪಾಸ್

ಬೆಂಗಳೂರು ಮೇ 25: ಕಳೆದ ವಿಧಾನಸಭೆ ಅಧಿವೇಶನದಲ್ಲಿ ಗಲಾಟೆ ಮಾಡಿದ್ದಕ್ಕೆ ಸಸ್ಪೆಂಡ್ ಆಗಿದ್ದ ಬಿಜೆಪಿ 18 ಶಾಸಕರ ಅಮಾನತನ್ನು ವಾಪಾಸ್ ಪಡೆಯಲಾಗಿದೆ. ಸ್ಪೀಕರ್ ಯುಟಿ ಖಾದರ್ ನೇತೃತ್ವದ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.


ಬಿಜೆಪಿಯ 18 ಶಾಸಕರ ಅಮಾನತು ಹಿಂಪಡೆಯುವ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಿತು. ಸಭೆಯಲ್ಲಿ, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್​. ಅಶೋಕ್, ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಭಾಗಿಯಾಗಿದ್ದರು. ಈ ಸಂಧಾನ ಸಭೆಯಲ್ಲಿ ಸಂಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ಹನಿಟ್ರ್ಯಾಪ್​ ಮತ್ತು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ಆ ವೇಳೆ ಬಿಜೆಪಿ ಶಾಸಕರು ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ​​ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಿ ಖಾದರ್​ ಆದೇಶಿಸಿದ್ದರು. ಆದರೆ, ಇದೀಗ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *