Connect with us

  BELTHANGADI

  ಸೌಜನ್ಯ ಪ್ರಕರಣದ ಮರು ತನಿಖೆಗೆ ಸಿಎಂ ಬಳಿ ಮನವಿ ಸಲ್ಲಿಸಿದ ಕರಾವಳಿ ಬಿಜೆಪಿ ಶಾಸಕರ ನಿಯೋಗ..!

  ಸೌಜನ್ಯ ಪ್ರಕರಣ ವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ವಿಧಾನ ಸೌಧದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

  ಬೆಂಗಳೂರು : ಸೌಜನ್ಯ ಪ್ರಕರಣ ವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ವಿಧಾನ ಸೌಧದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

  ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ್ ಕಾಮತ್, ಡಾ, ಭರತ್ ಶೆಟ್ಟಿ, ಭಾಗಿರಥಿ ಮುರುಳ್ಯ, ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಪೂಂಜಾ ಇದ್ದರು.

  ಮನವಿಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

  ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ.

  ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ.

  ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಮಗೆ ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಶಾಸಕರು X ನಲ್ಲಿ ಬರೆದುಕೊಂಡಿದ್ದಾರೆ. .

  Share Information
  Advertisement
  Click to comment

  You must be logged in to post a comment Login

  Leave a Reply