ಮಂಗಳೂರು, ಆಗಸ್ಟ್ 14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಹಕ್ಕುಚ್ಯುತಿ ಆರೋಪಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಡಳಿತದ ವಿರುದ್ದ ಬಿಜೆಪಿ ಶಾಸಕರ ಧರಣಿ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ದಕ್ಷಿಣ ಕನ್ನಡದ ಬಿಜೆಪಿ ಶಾಸಕರು ಧರಣಿ ಕೂತಿದ್ದಾರೆ. ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಹರೀಶ್ ಪೂಂಜಾ,ಡಾ.ವೈ ಭರತ್ ಶೆಟ್ಟಿ,ವೇದವ್ಯಾಸ ಕಾಮತ್,ಭಾಗಿರಥಿ ಮುರುಳ್ಯ, ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭಾಗಿಯಾಗಿದ್ದು, ಶಾಸಕರಿಗೆ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜೊತೆಗೆ ಬಿಜೆಪಿ ಶಾಸಕರ ವಾಗ್ವಾದ ವಾಗಿದ್ದು, ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ನಡೆದರೂ ಹಸ್ತಕ್ಷೇಪ ನಡೆಸಿದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಮುಗಿಲನ್ ತಾನು ಏನೂ ಹಸ್ತಕ್ಷೇಪ ಮಾಡಿಲ್ಲ ಎಂದಿದ್ದಾರೆ.