LATEST NEWS
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಎದೆ ನೋವು ಆಸ್ಪತ್ರೆಗೆ ದಾಖಲು
ಮಂಗಳೂರು ಫೆಬ್ರವರಿ 20: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರಾವಳಿ ಹಾಗೂ ಚಿಕ್ಕಮಗಳೂರಿನಲ್ಲಿ ಚುನಾವಣಾ ಕಾರ್ಯಕ್ರಮಗಳ ಹಿನ್ನಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಆಗಮಿಸಿದ್ದ ಅರುಣ್ ಸಿಂಗ್ ಅವರಿಗೆ ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನಲೆ ಅವರನ್ನು ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.