ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ಮಂಗಳೂರು ನವೆಂಬರ್ 14: ಮಂಗಳೂರಿನಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಬೈಠಕ್ ನಲ್ಲಿ ಭಾಗವಹಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದಾರೆ. ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಅವರು ಆಗಮಿಸಿದರು.

ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ದಕ್ಷಿಣಕನ್ನ ಜಿಲ್ಲಾ ಬಿಜೆಪಿಯ 7 ಶಾಸಕರು, ಸಂಸದ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಡುಪಿಯ ಬಿಜೆಪಿ ಮುಖಂಡರು ಹೂಗುಚ್ಛ, ಶಾಲು ಹೊದಿಸಿ ಸ್ವಾಗತಿಸಿದರು.

ನಗರದ ಸಂಘನಿಕೇತನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೈಠಕ್​ನಲ್ಲಿ ಭಾಗವಹಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮಂಗಳೂರಿಗೆ ಆಗಮಿಸಿದ್ದಾರೆ.

ಮಂಗಳೂರಿನ ಸಂಘನಿಕೇತನದಲ್ಲಿ ನವೆಂಬರ್ 1 1ರಿಂದ ಪಶ್ಚಿಮ ಮತ್ತು ದಕ್ಷಿಣ ಭಾರತದ ರಾಜ್ಯಗಳ ಆರ್​ಎಸ್​ಎಸ್ ಪ್ರಚಾರಕರ ಐದು ದಿನಗಳ ಅಭ್ಯಾಸ ವರ್ಗ ನಡೆಯುತ್ತಿದೆ. ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ, ಗೋವಾ, ತಮಿಳುನಾಡಿನ 200ಕ್ಕೂ ಅಧಿಕ ಪ್ರಮುಖ ಪ್ರಚಾರಕರು ಭಾಗವಹಿಸಿದ್ದಾರೆ.

ಇದೇ ಅವಧಿಯಲ್ಲಿ ಸರ ಸಂಘಚಾಲಕ ಮೋಹನ್ ಭಾಗವತ್ ನೇತೃತ್ವದಲ್ಲಿ ಉತ್ತರ ಹಾಗೂ ಪೂರ್ವ ಭಾರತದ ರಾಜ್ಯಗಳ ಪ್ರಚಾರಕರ ಅಭ್ಯಾಸ ವರ್ಗ ವಾರಾಣಸಿಯಲ್ಲಿ ನಡೆಯುತ್ತಿದೆ. ಈ ಅಭ್ಯಾಸ ವರ್ಗದ ಬೈಠಕ್​ನಲ್ಲಿ ಭಾಗವಹಿಸಿರುವ ಅಮಿತ್ ಷಾ ಈಗ ಪಶ್ಚಿಮ ಮತ್ತು ದಕ್ಷಿಣ ಭಾರತದ ರಾಜ್ಯಗಳ ಪ್ರಮುಖರ ಬೈಠಕ್​ನಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದಾರೆ.

Facebook Comments

comments