Connect with us

DAKSHINA KANNADA

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ನೇಮಕ

ಪುತ್ತೂರು ಫೆಬ್ರವರಿ 16: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ.ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ.


36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ ವನ್ ಜಿಲ್ಲೆಯಾಗಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿತ್ತು. ಬೂತ್ ನಿಂದ ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎಬಿವಿಪಿಯಲ್ಲಿ ತಾಲೂಕು ಅಧ್ಯಕ್ಷರಾಗಿ ನಂತರ ಬಿಜೆಪಿ ಮಂಡಲ ಉಪಾಧ್ಯಕ್ಷರಾಗಿ, ಮಾಧ್ಯಮ ವಕ್ತರಾರಾಗಿ, ಬಿಜೆಪಿ ಯುವಮೋರ್ಚಾದ ಮಂಡಲ ಉಪಾಧ್ಯಕ್ಷರಾಗಿ ನಂತರ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಮಾಧ್ಯಮ ಪ್ರಮುಖರಾಗಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ.

 

ಜೇಸಿಸ್ ಅಧ್ಯಕ್ಷರಾಗಿ, ರೋಟರಿಯಾಕ್ಟ್ ಪದಾಧಿಕಾರಿಯಾಗಿ ಹಾಗು ಅನೇಕ ಸಂಘ ಸಂಸ್ಥೆಗಳಲ್ಲಿ ಸಮಾಜಸಸೇವಕರಾಗಿ ಕೆಲಸ ನಿರ್ವಹಿಸಿದ್ದಾರೆ,ಪುತ್ತೂರು ಬಿಲ್ಲವ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಇವರು ಗ್ರಾಮ ಸಂಚಲನ ಸಮಿತಿ ಸದಸ್ಯರಾಗಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ,ಪುತ್ತೂರು ನಾರಾಯಣ ಗುರು ಮಂದಿರದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದರು, ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು ಜಿಲ್ಲಾ ಮೂರ್ತೆದಾರರ ಮಹಾಮಂಡಳದ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಇವರ ಸಂಘಟನಾ ಕಾರ್ಯಕ್ಕೆ ರಾಜ್ಯಮಟ್ಟದ ಜವಾಬ್ದಾರಿ ಒಲಿದು ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *