DAKSHINA KANNADA
ರಾಜ್ಯ ಕಾಂಗ್ರೆಸ್ ಸರಕಾರದ ಕಮಿಷನ್ ದಂಧೆ, ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ
ಪುತ್ತೂರು ಅಕ್ಟೋಬರ್ 17 :ರಾಜ್ಯ ಕಾಂಗ್ರೆಸ್ ಸರಕಾರದ ಕಮಿಷನ್ ದಂಧೆ, ಭ್ರಷ್ಟಾಚಾರ ಹಾಗೂ ಜನ ವಿರೋಧಿ ನಿಲುವು ಖಂಡಿಸಿ ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಪ್ರಾರಂಭದಲ್ಲಿ ಪಕ್ಷದ ಕಚೇರಿಯ ಬಳಿಯಿಂದ ಮೆರವಣಿಗೆಯಲ್ಲಿ ಆಗಮಿಸಿ ಬಳಿಕ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ವಿರುದ್ಧು ದಿಕ್ಕಾರ ಕೂಗಿಸಿದರು. ಪ್ರತಿಭಟನೆಯ ಬಳಿಕ ಸಹಾಯಕ ಆಯುಕ್ತರ ಮೂಲಕ ಸರಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸರಕಾರದಲ್ಲಿ ಹಣಕ್ಕೆ ಬರವಿದೆ. ಆದರೆ ಸಚಿವರ ಸೂಟ್‌ಕೇಸ್ ಬರಪೂರ ಭರ್ತಿಯಾಗಿದೆ. ಸಿದ್ದರಾಮರಾಮಯ್ಯ ಸರಕಾರಕ್ಕೆ ಅಸ್ತಿತ್ವಕ್ಕೆ ಕೆಲವೇ ತಿಂಗಳಲ್ಲಿ ಜನರು ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದ್ದು ಮುಂದಿನ ನಾಲ್ಕೂವರೆ ವರ್ಷ ಯಾವ ರೀತಿ ಇರಬಹುದು. ಸಿದ್ದರಾಮಯ್ಯ ಆಡಳಿತಕ್ಕೆ ಬಂದರೆ ಬರ, ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಭ್ರಷ್ಟಾಚಾರ ನಿಶ್ಚಿತ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು ಲಕ್ಷ ಲಕ್ಷ ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ. ಈಗ ರಾಜ್ಯದಲ್ಲಿಯೂ ಅಂತದೇ ಸ್ಥಿತಿ ನಿರ್ಮಾಣವಾಗಿದ್ದು ಕೋಟ್ಯಾಂತರ ಹಣ ಮಂತ್ರಿಗಳಿಗೆ ಬರುತ್ತಿದೆ ಎಂದು ಆರೋಪಿಸಿದರು.