LATEST NEWS
ತೈಲಬೆಲೆ ಏರಿಕೆ ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ – ಪಿವಿಎಸ್ ಬಳಿ ರಸ್ತೆ ತಡೆ ನಡೆಸಿದವರನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು ಜೂನ್ 20: ರಾಜ್ಯ ಸರಕಾರ ಇತ್ತೀಚೆಗೆ ತೈಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನಲ್ಲೂ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಮಂಗಳೂರಿನ ಪಿ.ವಿ.ಎಸ್ ವೃತ್ತದ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ರಾಜ್ಯಸರಕಾರದ ವಿರುದ್ದ ಘೋಷಣೆ ಕೂಗಿದರು. ಕಾಂಗ್ರೇಸ್ ಸರಕಾರ ಆಡಳಿತಕ್ಕೆ ಬಂದ ನಂತರ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ.ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಸಿದ್ದರಾಮಯ್ಯ ಅವರಿಗೆ ಸರಿಯಾಗಿ ಲೆಕ್ಕ ಬರುವುದೋ ಇಲ್ಲವೋ ಗೊತ್ತಿಲ್ಲ. ಜನರಿಗೆ ಬೆಲೆ ಏರಿಕೆಯ ಹೊರೆಯನ್ನು ಕಾಂಗ್ರೇಸ್ ಹಾಕುತ್ತಿದೆ ಎಂದರು.
ಪ್ರತಿಭಟನೆ ಅಂಗವಾಗಿ ಪಿವಿಎಸ್ ಸರ್ಕಲ್ ನಲ್ಲಿ ಕೆಲಕಾಲ ರಸ್ತೆ ಸಂಚಾರಕ್ಕೆ ತಡೆ ಮಾಡಲಾಯಿತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಪ್ರತಿಭಟನೆಯಿಂದಾಗಿ ಪಿವಿಎಸ್ ಬಳಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನ ಸವಾರರು ಸಂಕಷ್ಟಪಡುವಂತಾಗಿತ್ತು.