Connect with us

LATEST NEWS

ಸಚಿವ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Share Information

ಸಚಿವ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರು ಸೆಪ್ಟಂಬರ್ 16: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು .

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು . ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ತಮ್ಮ  ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು .

ಈಗಾಗಲೇ ಸಿಐಡಿ ತನಿಖೆಯ ಸಾಕ್ಷ ನಾಶವಾಗಿರುವುದು ಸಾಬೀತಾಗಿದೆ. ಸಿಬಿಐ ತನಿಖೆಯ ಮೇಲೆ ಸಚಿವ ಜಾರ್ಜ್ ಪ್ರಭಾವ ಬೀರುವ ಸಂಶಯವಿದೆ. ಈ ಹಿನ್ನೆಯಲ್ಲಿ ಜಾರ್ಜ್ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು .


Share Information
Advertisement
Click to comment

You must be logged in to post a comment Login

Leave a Reply