LATEST NEWS
ಕಾಂಗ್ರೇಸ್ ಸರಕಾರದ ನೀತಿಯಿಂದಾಗಿ ಇದೀಗ ಜಿಲ್ಲೆ ಹಗಲಿನಲ್ಲೇ ಸ್ತಬ್ದವಾಗುವ ಸ್ಥಿತಿ ಬಂದಿದೆ – ಸತೀಶ್ ಕುಂಪಲ

ಮಂಗಳೂರು ಜುಲೈ 14: ರಾಜ್ಯ ಸರಕಾರದ ನೀತಿಯಿಂದಾಗಿ ಇದೀಗ ಕಾರ್ಮಿಕರಿಗೆ ಕೆಲಸ ಇಲ್ಲದೆ ಹಗಲಿನಲ್ಲೇ ಸ್ತಬ್ದವಾಗುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಮಂಡಲ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾತ್ರಿ 8 ಗಂಟೆಗೆ ಮಂಗಳೂರು ನಗರ ಸ್ತಬ್ದ ಆಗುತ್ತದೆ ಎಂದಿದ್ದರು. ಈಗ ಕಾಂಗ್ರೆಸ್ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರಿಗೆ ಕೆಲಸ ಇಲ್ಲದೆ ಹಗಲಿನಲ್ಲೇ ಸ್ತಬ್ದವಾಗುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಮಂಡಲ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಯು.ಟಿ. ಖಾದರ್ ವಿಧಾನಸಭೆ ಸ್ಪೀಕರ್ ಆದರೂ ರಾಜಕಾರಣ ಬಿಟ್ಟಿಲ್ಲ. ರಮಾನಾಥ ರೈ ಇನ್ನೊಂದು ಗುಂಪು ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಗೆ ಒಂದು ಮರಳು ನೀತಿ ಮಾಡದೆ ಜನರನ್ನು ಮರುಳು ಮಾಡಲಾಗುತ್ತಿದೆ ಎಂದರು. ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಪಕ್ಕದ ಕೇರಳ ರಾಜ್ಯದಲ್ಲಿ ಕಡಿಮೆ ದರಕ್ಕೆ ಕೆಂಪುಕಲ್ಲು ಸಿಗುತ್ತದೆ. ಆದರೆ ದಕ್ಷಿಣ ಕನ್ನಡದಲ್ಲಿ ಸಿಗುವುದಿಲ್ಲ. ಇದರ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಕೈವಾಡ ಇದೆ ಎಂದರು.