DAKSHINA KANNADA
ರಾಹುಲ್ ಗಾಂಧಿ ವಿರುದ್ದ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು ಫೆಬ್ರವರಿ 12: ಪ್ರಧಾನಿ ನರೇಂದ್ರ ಮೋದಿ ಜಾತಿ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿದೆ.
ಬಿಜೆಪಿ ಕಛೇರಿ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಹುಲ್ ಗಾಂಧಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ್, ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಬಗ್ಗೆ ಮಾತಾಡುವ ಯೋಗ್ಯತೆಯಿಲ್ಲ, ರಾಹುಲ್ ಗಾಂಧಿ ಪರಿವಾರದ ಡಿಎನ್ಎ ಸರಿಯಿಲ್ಲ, ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೇಸ್ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ.

ಮುಂಬರುವ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ಶತಸಿದ್ಧ, ಕಾಂಗ್ರೇಸ್ ಈ ರೀತಿ ವೈಯುಕ್ತಿಕ ದಾಳಿ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬಿಜೆಪಿ ಸೂಕ್ತ ಉತ್ತರ ನೀಡಲಿದೆ ಎಂದು ಬಿಜೆಪಿ ಮುಖಂಡ ಆರ್.ಸಿ.ನಾರಾಯಣ್ ಎಚ್ಚರಿಕೆ ನೀಡಿದರು.