Connect with us

  LATEST NEWS

  ಶಾಸಕ ಕಾಮತ್ ಮೇಲೆ ಪ್ರಕರಣ: ಬಿಜೆಪಿ ವತಿಯಿಂದ ಫೆಬ್ರವರಿ 17ರಂದು ಬೃಹತ್ ಪ್ರತಿಭಟನೆಗೆ ಕರೆ

  ಮಂಗಳೂರು ಫೆಬ್ರವರಿ 16: ಜೆರೋಸಾ ಶಿಕ್ಷಣ ಸಂಸ್ಥೆ ವಿವಾದದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮನಪಾ ಸದಸ್ಯರು ಹಾಗೂ ಹಿಂದೂ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣ ವಿರೋಧಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣಮಂಡಲ ವತಿಯಿಂದ ಫೆಬ್ರವರಿ 17 ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.


  ಜೆರೋಸಾ ಶಿಕ್ಷಣ ಸಂಸ್ಥೆಯಸ್ಸಿ ಶ್ರೀರಾಮ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಅವಹೇಳನವನ್ನು ವಿರೋಧಿಸಿದ ಕಾರಣಕ್ಕೆ ರಾಜ್ಯ ಸರಕಾರ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ ದಾಖಲಿಸಿದೆಯ ಇದನ್ನು ಖಂಡಿಸಿ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಫೆಬ್ರವರಿ 17 ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.

  ಧರ್ಮದ ಮೇಲಾಗುವ ಅನ್ಯಾಯವನ್ನು ಪ್ರತಿಭಟಿಸಲು ಎಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply