LATEST NEWS
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರುದ್ದ ಬಿಜೆಪಿ ವಿಭಿನ್ನ ರೀತಿ ಪ್ರತಿಭಟನೆ
ಮಂಗಳೂರು ಜೂನ್ 17: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮಂಗಳೂರಿನಲ್ಲೂ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಇತ್ತೀಚೆಗೆ ರಾಜ್ಯ ಸರಕಾರ ಪೆಟ್ರೋಲ್ ಹಾಗೂ ಡಿಸೇಲೆ ಬೆಲೆ ಏರಿಕೆ ಮಾಡಿದ್ದು, ಇದೀಗ ರಾಜ್ಯ ಸರಕಾರದ ವಿರುದ್ದ ಬಿಜೆಪಿ ರಸ್ತೆಗಿಳಿದಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನಲ್ಲಿ ಬಿಜೆಪಿ ಮುಖಂಡರು ರಾಜ್ಯ ಸರಕಾರ ವಿರುದ್ದ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಬಿಜೆಪಿ ಮುಂಭಾಗದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಚೇರಿಯಿಂದ ಕಾರೊಂದಕ್ಕೆ ಹಗ್ಗ ಕಟ್ಟಿ ನವಭಾರತ ಸರ್ಕಲ್ ಬಳಿ ಇರುವ ಪೆಟ್ರೋಲ್ ಬಂಕ್ ಗೆ ಎಳೆದುಕೊಂಡು ಹೋಗಿ ಅಲ್ಲಿ ಚೆಂಬು ಹಾಗೂ ಗೆರಟೆ ಹಿಡಿದು ಬಿಕ್ಷೆ ಬೇಡಿ ಪೆಟ್ರೋಲ್ ಖರೀದಿಸಿ ಕಾರಿಗೆ ಹಾಕುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಈ ಸಂಧರ್ಭದಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರು ಕೂಡ ದ್ವಿಚಕ್ರವಾಹನವನ್ನು ಪೆಟ್ರೋಲ್ ಬಂಕ್ ವರೆಗೆ ತಳ್ಳಿಕೊಂಡು ಹೋಗಿ ವಿಭಿನ್ನವಾಗಿ ಪ್ರತಿಭಟಿಸಿದರು. ಈ ಪ್ರತಿಭಟನೆಯಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರು ಗಳಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ್, ಮ.ನಾ.ಪ ಮೇಯರ್ ಸುಧಿರ್ ಶೆಟ್ಟಿ ಹಾಗುಜ ಮ.ನ.ಪ. ಸದಸ್ಯರು ಹಾಗು ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.
You must be logged in to post a comment Login