Connect with us

LATEST NEWS

ಕಾಸರಗೋಡು ಬಿಜೆಪಿಯಲ್ಲಿ ಭಿನ್ನಮತ – ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು

ಕಾಸರಗೋಡು ಫೆಬ್ರವರಿ 20: ಕಾಸರಗೋಡು ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದ್ದು, ಬಿಜೆಪಿ ನಾಯಕತ್ವದ ವಿರುದ್ದ ಕಾರ್ಯಕರ್ತರು ಅಸಮಧಾನ ವ್ಯಕ್ತಪಡಿಸಿದ್ದು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿದಿದ್ದಾರೆ.


ಕುಂಬಳೆ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಿಪಿಎಂ ಅಪವಿತ್ರ ಮೈತ್ರಿ ಮಾಡಿಕೊಂಡಿತ್ತು. ಇದು ಕೆಲ ಸಮಯಗಳಿಂದ ಬಿಜೆಪಿಯಲ್ಲಿ ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಿತ್ತು. ಹಲವು ಬಾರಿ ರಾಜ್ಯ ನಾಯಕತ್ವಕ್ಕೆ ದೂರು ಸಲ್ಲಿಸಿದ್ದರೂ ಈ ಬಗ್ಗೆ ಗಮನ ಹರಿಸಿರಲಿಲ್ಲ. ಇದು ಮಾತ್ರವಲ್ಲ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದ್ದು, ಈ ಬಗ್ಗೆ ಪಕ್ಷದ ಕಾರ್ಯಕರ್ತರಲ್ಲಿ ಅತೃಪ್ತಿಗೆ ಕಾರಣವಾಗಿದೆ. ನೂರರಷ್ಟು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಸಮಸ್ಯೆ ಪರಿಹರಿಸುವ ತನಕ ಹೋರಾಟ ಮುಂದುವರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.


ನಾಯಕತ್ವದ ನಿಲುವಿನ ವಿರುದ್ಧ ಕೆಲ ಪದಾಧಿಕಾರಿಗಳು ಹಾಗೂ ಮುಖಂಡರು ಅಸಮಾಧಾನಗೊಂಡಿದ್ದು , ದಿನಗಳ ಹಿಂದೆ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಪಿ . ರಮೇಶ್ ರಾಜೀನಾಮೆ ನೀಡಿದ್ದರು.ಇದರ ಬೆನ್ನಿಗೆ ಕೆಲ ಪದಾಧಿಕಾರಿಗಳು ರಾಜಿನಾಮೆಗೆ ಮುಂದಾಗಿದ್ದರು

Advertisement
Click to comment

You must be logged in to post a comment Login

Leave a Reply