LATEST NEWS
ಬಿಜೆಪಿ ಬಂಡಾಯ ನಾಯಕರ ಮೂಲಕ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ಗೆಲ್ಲಲಿದೆ- ರಮಾನಾಥ ರೈ
ಬಿಜೆಪಿ ಬಂಡಾಯ ನಾಯಕರ ಮೂಲಕ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ಗೆಲ್ಲಲಿದೆ- ರಮಾನಾಥ ರೈ
ಮಂಗಳೂರು ಎಪ್ರಿಲ್ 24: ದಕ್ಷಿಣಕನ್ನಡದಲ್ಲಿ ಬಂಡಾಯ ಬಿಜೆಪಿ ನಾಯಕರ ಮೂಲಕ ಗೆಲುವು ಸಾಧಿಸಲು ಅನುಕೂಲವಾಗುವ ಎಲ್ಲಾ ವ್ಯವಸ್ಥೆ ಮಾಡಲಾಗುವುದೆಂದು ರಮಾನಾಥ ರೈ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಬಿಜೆಪಿ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ ಅವರೆಲ್ಲಾ ಕಾಂಗ್ರೆಸ್ ಗೆ ಶೀಘ್ರದಲ್ಲೇ ಸೇರ್ಪಡೆಯಾಗಲಿದ್ದಾರೆ ಒಂದು ವೇಳೆ ಅವರು ಕಾಂಗ್ರೆಸ್ ಗೆ ಸೇರ್ಪಡೆ ಯಾಗದಿದ್ದರೂ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅನೂಕುಲವಾಗುವ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುವುದೆಂದು ಅವರು ಮಾರ್ಮಿಕವಾಗಿ ನುಡಿದರು.
ನಳಿನ್ ಕುಮಾರ್ ಕಟೀಲ್ ನನಗೆ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಆದರೆ ವಾಸ್ಥವದಲ್ಲಿ ಈ ಬಾರಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಕಾರ್ಯಕರ್ತರು ವಿಶ್ರಾಂತಿ ನೀಡಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ಇದೇ ಬರುವ ಏಪ್ರಿಲ್ 27 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ರೋಡ್ ಶೋ ನಡೆಸಿ ಬೃಹತ್ ಸಮಾವೇಶ ದಲ್ಲಿ ಭಾಗವಹಿಸಲಿದ್ದಾರೆ. ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
You must be logged in to post a comment Login