LATEST NEWS
ಕೇಂದ್ರ ಮಂತ್ರಿಮಂಡಲದಲ್ಲಿ ಶೇಕಡ 30 ಎಸ್ಸಿ ಎಸ್ಟಿ ಮಂತ್ರಿಗಳು ಇದ್ದಾರೆ- ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ – ನಳಿನ್ ಕುಮಾರ್ ಕಟೀಲ್

ಉಡುಪಿ ಜುಲೈ 25: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಹಿದಾ ಹೋರಾಟ ಮಾಡಿ ಮುಖ್ಯಮಂತ್ರಿಯಾದರು, ಸಿಎಂ ಆದ ಮೇಲೂ ಅಹಿಂದ ಮರೆತು ದಲಿತ ಮುಖ್ಯಮಂತ್ರಿ ಚರ್ಚೆಯನ್ನೇ ಮುಚ್ಚಿಹಾಕಿದ್ದರು, ಆದರೆ ಈಗ ತಾಕತ್ ಇದ್ದರೆ ದಲಿತ ಸಿಎಂ ಮಾಡಿ ಎನ್ನುವುದು ಎಷ್ಟು ಸರಿ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ನಲ್ಲಿ ರಾತ್ರಿ-ಹಗಲು ಕೆಲಸ ಮಾಡಿದ ಜಿ. ಪರಮೇಶ್ವರ್ ರನ್ನು ಮೂಲೆಗುಂಪು ಮಾಡಿದರು, ಪರಮೇಶ್ವರ ಮತ್ತು ಖರ್ಗೆಯನ್ನು ಸೋಲಿಸಿದ ಇತಿಹಾಸ ಕಾಂಗ್ರೇಸ್ ಗೆ ಇದೆ.

ಆದರೆ ಬಿಜೆಪಿ ವಾಜಪೇಯಿ ಸರ್ಕಾರ ಮುಸ್ಲಿಂ ಬಂಧುವನ್ನು ರಾಷ್ಟ್ರಪತಿ ಮಾಡಿದೆ. ನರೇಂದ್ರ ಮೋದಿ ದಲಿತ ರಾಷ್ಟ್ರಪತಿಯನ್ನು ದೇಶಕ್ಕೆ ಕೊಟ್ಟಿದ್ದಾರೆ. ಯಡಿಯೂರಪ್ಪ ಗೋವಿಂದ ಕಾರಜೋಳ ರನ್ನು ಉಪಮುಖ್ಯಮಂತ್ರಿ ಮಾಡಿದ್ದಾರೆ. ಅಲ್ಲದೆ ಕೇಂದ್ರದಲ್ಲಿ ನಾರಾಯಣಸ್ವಾಮಿ ಸಚಿವರಾಗಿದ್ದಾರೆ. ಈಗ ಇರುವ ಕೇಂದ್ರ ಮಂತ್ರಿಮಂಡಲದಲ್ಲಿ ಶೇಕಡ 30 ಎಸ್ ಸಿ ಎಸ್ ಟಿ ಮಂತ್ರಿಗಳು ಇದ್ದಾರೆ ಎಂದರು.
ಆದರೆ ಕಾಂಗ್ರೇಸ್ ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ ಹೇಳಿ ಉಡುಪಿಯಲ್ಲಿ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.