LATEST NEWS
ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಅಮಿತ್ ಶಾ ಪ್ರವಾಸ
ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಅಮಿತ್ ಶಾ ಪ್ರವಾಸ
ಮಂಗಳೂರು ಫೆಬ್ರವರಿ 18: ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರವಾಸ ಆರಂಭಗೊಳ್ಳಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸುವ ನಿಟ್ಟಿನಲ್ಲಿ ಬಿಜೆಪಿ ಅಮಿತ್ ಶಾ ಅವರು ಕರಾವಳಿ ಜಿಲ್ಲೆಗಳ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ನಾಳೆ ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. ಆನಂತರ ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅಮಿತ್ ಶಾ ಅವರ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಫೆಬ್ರವರಿ 20 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಂಜಾನೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ ಈ ಮೂಲಕ ರಾಜ್ಯದ ಕರಾವಳಿಯಲ್ಲಿ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಇಳಿಯಲಿದ್ದಾರೆ. ನಂತರ ಉಪಹಾರ ಮುಗಿಸಿ ಬೆಳಗ್ಗೆ 9 ಗಂಟೆಗೆ ಸುಬ್ರಹ್ಮಣ್ಯದ ಕುಲ್ಕುಂದದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಂಗಮದಲ್ಲಿ ಮಾತನಾಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಬ್ರಹ್ಮಣ್ಯ ಮತ್ತು ಬಂಟ್ವಾಳದಲ್ಲಿ ನವಶಕ್ತಿ ಸಂಗಮ ನಡೆಯಲಿದ್ದು ಸೀಮಿತ ಕಾರ್ಯಕರ್ತರು ಹೊರತುಪಡಿಸಿ ಉಳಿದವರಿಗೆ ಪಾಲ್ಗೊಳ್ಳುವ ಅವಕಾಶ ಇಲ್ಲ. ನಂತರ ಬೆಳಗ್ಗೆ 11 ಗಂಟೆಗೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ ಇತ್ತೀಚಿಗೆ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಕಾರ್ಯಕರ್ತ ಕಾಟಿಪಳ್ಳ ದೀಪಕ್ ರಾವ್ ಮನೆಗೆ ಭೇಟಿ ನೀಡಲಿದ್ದಾರೆ. ನಂತರ ಅವರು ಅಲ್ಲಿಂದ ಉಡುಪಿ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.
You must be logged in to post a comment Login