Connect with us

    DAKSHINA KANNADA

    ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ -ಶಾಸಕ ಸಂಜೀವ ಮಠಂದೂರು…

    ಪುತ್ತೂರು ಡಿಸೆಂಬರ್ 10: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಗೆ ಮತದಾನ ನಡೆಯುತ್ತಿದೆ. ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲೂ ಬೆಳಿಗ್ಗೆಯಿಂದ ಮತದಾನ ಪ್ರಾರಂಭವಾಗಿದ್ದು, ಮತದಾನದ ಅವಕಾಶವಿರುವ ಶಾಸಕರು ಹಾಗೂ ಸಚಿವರು ಈಗಾಗಲೇ ಮತದಾನ ಮಾಡಿದ್ದಾರೆ.


    ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಪುತ್ತೂರು ನಗರಸಭೆ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಶಾಸಕರ ಜೊತೆ ನಗರ ಸಭೆಯ ಬಿಜೆಪಿಯ 26 ಕೌನ್ಸಿಲರ್ ಗಳೂ ಮತದಾನ ಮಾಡಿದರು.

    ಮತ ಚಲಾಯಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು ರಾಜ್ಯದಲ್ಲಿ ಈ ಬಾರಿ 15 ಕ್ಕೂ ಮಿಕ್ಕಿದ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ದಕ್ಷಿಣಕನ್ನಡ-ಉಡುಪಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ 3700 ಕ್ಕೂ ಮಿಕ್ಕಿದ ಮತಗಳಿಂದ ಜಯಗಳಿಸಲಿದ್ದು, ಬಿಜೆಪಿ ಚುನಾಯಿತ ಪ್ರತಿನಿಧಿಗಳ ಜೊತೆಗೆ ಇತರರೂ ತಮ್ಮ ಎರಡನೇ ಪ್ರಾಶಸ್ತ್ಯದ ಮತಗಳನ್ನು ಕೋಟಾ ಶ್ರೀನಿವಾಸ ಪೂಜಾರಿಗೆ ನೀಡಲಿದ್ದಾರೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply