LATEST NEWS
ಉಡುಪಿ – ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ
ಉಡುಪಿ ಸೆಪ್ಟೆಂಬರ್ 14: ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆಯೊಬ್ಬರು ತಮ್ಮ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಉಡುಪಿಯ ಅಲೆವೂರು ಗ್ರಾಮದ ಕುಕ್ಕಿಕಟ್ಟೆಯಲ್ಲಿ ನಡೆದಿದೆ.
ಮೃತರನ್ನು ಆಶಾ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದುಬಂದಿದೆ.
ಮೃತಳ ಬಳಿ ಮರಣ ಪತ್ರ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ, ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಕಣ್ಣುಗಳು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನ ಆತ್ಮಹತ್ಯೆ ನಂತರ ಮಾನಸಿಕವಾಗಿ ನೊಂದಿದ್ದರು ಎಂದು ಹೇಳಲಾಗಿದೆ.