DAKSHINA KANNADA
ಬಹುಮತ ಸಾಭೀತಿಗೆ ದೇವರ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

ಬಹುಮತ ಸಾಭೀತಿಗೆ ದೇವರ ಮೊರೆ ಹೋದ ಬಿಜೆಪಿ ಕಾರ್ಯಕರ್ತರು
ಪುತ್ತೂರು ಮೇ 19: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತುಪಡಿಸುವಂತಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಪುತ್ತೂರಿನಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ರಾಜ್ಯದ ಜನತೆ ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿ ಬಿಜೆಪಿಗೆ ಬಹುಮತ ನೀಡಿದ್ದಾರೆ.

ಆದರೆ ಇದೀಗ ಜೆಡಿಎಸ್ ಹಾಗೂ ಕಾಂಗ್ರೇಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯಲು ಹವಣಿಸುತ್ತಿದೆ.ಇದು ರಾಜ್ಯದ ಜನತೆಗೆ ಮಾಡಿದ ದ್ರೋಹವಾಗಿದ್ದು, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಬೇಕು ಎಂದು ದೇವರ ಮುಂದೆ ಪ್ರಾರ್ಥನೆಯನ್ನು ಕಾರ್ಯಕರ್ತರು ಮಾಡಿದ್ದಾರೆ.