LATEST NEWS
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಪತ್ತೆ..!

ಉಡುಪಿ, ಮೇ 19: ಕೊರೊನಾ ಜೊತೆಗೆ ಬ್ಲಾಕ್ ಫಂಗಸ್ ರಾಜ್ಯದಲ್ಲಿ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲೂ ಬ್ಲಾಕ್ ಫಂಗಸ್ ಪತ್ತೆ ಯಾಗಿದೆ.
ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಹೊರ ಜಿಲ್ಲೆಗಳಿಂದ ಚಿಕಿತ್ಸೆ ಪಡೆಯಲು ಕೆಎಂಸಿ ಗೆ ದಾಖಲಾಗಿದ್ದ ರೋಗಿಗಳಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಧಾರವಾಡ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಹರಿಹರದ ರೋಗಿಗಳಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ.

ಈಗಾಗಲೇ ಆರು ಮಂದಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದ್ದು, ಅನ್ಯ ಚಿಕಿತ್ಸೆಗೆ ದಾಖಲಾದವರಲ್ಲಿ ಕೋವಿಡ್ ಕಂಡುಬಂದಿದೆ. ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದ ಕೊರೋನಾ ರೋಗಿಗಳಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿರೋದನ್ನು ಡಿ ಎಚ್ ಒ ಡಾ. ಸುಧೀರ್ ಚಂದ್ರ ಸೂಡ ಖಚಿತಪಡಿಸಿದ್ದಾರೆ.