ಬೆಂಗಳೂರು,ಫೆಬ್ರವರಿ 15: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರ ಗಾಯಾಳಾಗಿದ್ದು,ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.