Connect with us

KARNATAKA

5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಹೈಕೋರ್ಟ್…!!

ಬೆಂಗಳೂರು ಮಾರ್ಚ್ 10: 5 ಮತ್ತು 8ನೇ ತರಗತಿ ಮಕ್ಕಳಿಗೆ ರಾಜ್ಯ ಶಿಕ್ಷಣ ಇಲಾಖೆ ನಡೆಸಲು ನಿರ್ಧರಿಸಲಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.


ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ (5 and 8th class) ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ (Karnataka High Court) ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಅನುದಾನ‌ರಹಿತ ಶಾಲೆಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಮಾನ ಪ್ರಕಟಿಸಿದೆ.

ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಪೀಠದಿಂದ ಈ ಮಹತ್ವದ ಆದೇಶ ಹೊರ ಬಿದ್ದಿದೆ. ಈ ಮೂಲಕ ಸದ್ಯ 5 ಮತ್ತು 8ನೇ ತರಗತಿ ಮಕ್ಕಳಿಗೆ ಇದ್ದ ಪಬ್ಲಿಕ್‌ ಎಕ್ಸಾಂ ಆತಂಕ ದೂರವಾಗಿದೆ. ಅರ್ಜಿದಾರರ ಪರವಾಗಿ ವಕೀಲ ಕೆ.ವಿ.ಧನಂಜಯ್ ಶಾಸಕಾಂಗದಲ್ಲಿ ಚರ್ಚೆ ಆಗದೇ ಅಧಿಕಾರಿಗಳೇ ನಿರ್ಧಾರ ಮಾಡಿದ್ದರು ಎಂದು ವಾದಿಸಿದರು. ಈ ಆದೇಶದ ಬಳಿಕ ಆಯಾಯ ಶಾಲೆಗಳು ಹೊಸದಾಗಿ ಪರೀಕ್ಷೆ ದಿನಾಂಕ ನಿಗದಿಗೆ ಅವಕಾಶ ಮಾಡಿ ಕೊಡಲಾಗಿದೆ. ಜೊತೆಗೆ ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಸೂಚನೆ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *