Connect with us

    DAKSHINA KANNADA

    ಬೈಕ್ ಮೇಲೆ ಪಲ್ಟಿಯಾದ ಬೊಲೆರೋ – ಬೈಕ್ ಸವಾರ ಸಾವು

    ಪುತ್ತೂರು ಫೆಬ್ರವರಿ 21: ಬೊಲೆರೋ ವಾಹನವೊಂದು ಪಲ್ಟಿಯಾಗಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೋಮವಾರ ನಡೆದಿದೆ.


    ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ ಕೊರಗಪ್ಪ ಗೌಡ (58) ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ನಾಯ್ಕ ಚಲಾಯಿಸುತ್ತಿದ್ದ ಬೊಲೆರೋ ಪಿಕಪ್ ಕಡಬದಿಂದ ಬರುತ್ತಿದ್ದು ಈ ವೇಳೆ ಓಡ್ಲಾ ಎಂಬಲ್ಲಿ ದಿಢೀರ್ ಬ್ರೇಕ್ ಹಾಕಿದ್ದಾರೆ. ಪರಿಣಾಮವಾಗಿ ಬೊಲೆರೋ ಪಲ್ಟಿಯಾಗಿ ಕೊರಗಪ್ಪ ಅವರು ಚಲಾಯಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ.

    ಇನ್ನು ಬೈಕ್ ಹಾಗೂ ಸವಾರ ಕೊರಗಪ್ಪ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಕೊರಗಪ್ಪ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

     

    Share Information
    Advertisement
    Click to comment

    You must be logged in to post a comment Login

    Leave a Reply