Connect with us

    FILM

    ಬಾಲಿವುಡ್‌ ನಟ ಶ್ರೇಯಸ್ ತಲ್ಪಡೆಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ಮುಂಬೈ, ಡಿಸೆಂಬರ್ 15: ಬಾಲಿವುಡ್‌ ನಟ ಶ್ರೇಯಸ್ ತಲ್ಪಡೆ ಅವರಿಗೆ ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ‘ವೆಲ್​ಕಮ್​ ಟು ದಿ ಜಂಗಲ್’ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ ಅವರು ಮನೆಗೆ ತೆರಳುವ ವೇಳೆಯಲ್ಲಿ ಹೃದಯಾಘಾತ ಸಂಭವಿಸಿತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.

    ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೇಯಸ್ ತಲ್ಪಡೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ರೇಯಸ್ ತಲ್ಪಡೆ ಅವರು 2002ರಲ್ಲಿ ಬಾಲಿವುಡ್‌ ಸಿನಿಮಾರಂಗಕ್ಕೆ ಕಾಲಿಟ್ಟರು. ‘ಆಂಖೇ’ ಅವರು ನಟಿಸಿದ ಮೊದಲ ಸಿನಿಮಾ.

    2007ರಲ್ಲಿ ತೆರೆಕಂಡ ‘ಓಂ ಶಾಂತಿ ಓಂ’ ಸಿನಿಮಾದಲ್ಲಿ ಶಾರುಖ್​ ಗೆಳೆಯನಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ‘ಗೋಲ್​ಮಾಲ್​ ರಿಟರ್ನ್ಸ್​’, ಗೋಲ್​ಮಾಲ್​ 3’, ‘ಹೌಸ್​ಫುಲ್ 2’ ಸೇರಿದಂತೆ ಹಲವು ಹಾಸ್ಯ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply