Connect with us

    FILM

    ಬಾಲಿವುಡ್ ನಟಿ ಮಹಿಮಾ ಚೌಧರಿಗೆ ಸ್ತನ ಕ್ಯಾನ್ಸರ್….!!

    ಮುಂಬೈ ಜೂನ್ 09: ಬಾಲಿವುಡ್ ನಟಿ ಮಹಿಮಾ ಚೌಧರಿ ಅವರಿಗೆ ಸ್ತನ ಕ್ಯಾನ್ಸರ್ ಕಾಣಿಸಿಕೊಂಡಿದೆ. ಈ ಕುರಿತಂತೆ ಬಾಲಿವುಡ್ ನಟ ಅನುಪಮ್ ಖೇರ್ ಅವರು ಬಹಿರಂಗಪಡಿಸಿದ್ದಾರೆ.


    90 ರ ದಶಕದಲ್ಲಿ ಅನೇಕ ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಮಿಂಚಿದ್ದ ನಟಿ ಮಹಿಮಾ ಚೌಧರಿ ಅವರಿಗೆ ಸ್ತನ ಕ್ಯಾನ್ಸರ್ ಕಾಣಿಸಿಕೊಂಡಿದೆ. ಈ ಕುರಿತಂತೆ ಅನುಪಮ್ ಖೇರ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ.

    ನಾನು ನನ್ನ 525 ನೇ ಚಿತ್ರ ‘ದಿ ಸಿಗ್ನೇಚರ್’ ಚಿತ್ರಕ್ಕೆ ಮಹಿಮಾ ಚೌದರಿ ಅವರನ್ನು ಮಾತನಾಡಿಸಿದಾಗ, ಅವರು ತಮಗೆ ಸ್ತನ ಕ್ಯಾನ್ಸರ್ ಇರುವುದಾಗಿ ತಿಳಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಅವರು ಎಷ್ಟು ಧೈರ್ಯವಂತೆ ಎಂದು ನನಗೆ ಆಶ್ಚರ್ಯವಾಯಿತು. ಮಹಿಮಾ ಅವರು ಈ ವಿಷಯದಲ್ಲಿ ಅನೇಕ ಹೆಣ್ಣುಮಕ್ಕಳಿಗೆ ಸ್ಪೂರ್ತಿಯ ಚಿಲುಮೆ. ಮಹಿಮಾ ನೀವು ನಮ್ಮ ರಿಯಲ್ ಹೀರೋ. ನೀವು ಬೇಗ ಗುಣಮುಖರಾಗಲಿ ಎಂದು ನಾವೆಲ್ಲರೂ ಪ್ರಾರ್ಥಿಸುತ್ತೇವೆ’ ಎಂದು ಅನುಪಮ್ ಬರೆದುಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply