Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಿರ್ದೇಶಕ ಭೇಟಿ

ಪುತ್ತೂರು ಜೂನ್ 24: ಬಾಲಿವುಡ್ ನ ಖ್ಯಾತ ಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಟೋ ಒಂದನ್ನು ಹಂಚಿಕೊಂಡಿದ್ದಾರೆ.


ಬಾಲಿವುಡ್ ನಲ್ಲಿ ಜನಪ್ರಿಯ ನಿರ್ದೇಶಕರಾಗಿ ಬರಹಗಾರರಾಗಿರುವ ಮಧುರ್ ಭಂಡಾರ್ಕರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಾಲಿವುಡ್ ನ ಹಲವು ನಟ ನಟಿಯರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುತ್ತಲೇ ಇರುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಿಂತಿರುವ ಪೋಟೋ ಒಂದನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement
Click to comment

You must be logged in to post a comment Login

Leave a Reply