Connect with us

    DAKSHINA KANNADA

    ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, ಹೈ ಅಲರ್ಟ್..!

    ಮಂಗಳೂರು :  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಬಾಂಬ್ ಬೆದರಿಕೆ ಬಂದಿದ್ದು ಭದ್ರತಾ ಪಡೆಯನ್ನು ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಪ್ರಸ್ತುತ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು.

    ಬೆಳಗ್ಗೆ 10 ಗಂಟೆಗೆ ಅಕ್ರಂ ವೈಕರ್ ಎಂಬ ಹೆಸರಿನ ಐಡಿಯಿಂದ ಈ ಇ-ಮೇಲ್  ಸಂದೇಶ ಬಂದಿದೆ. ಡ್ರಗ್ ಕಿಂಗ್‌ಪಿನ್ ಜಾಫರ್ ಸಾದಿಕ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಕೃತಿಗಾ ಉದಯನಿಧಿ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
    ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್‌ಎಲ್‌ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ಒತ್ತಾಯಿಸಿದೆ. ಬೆದರಿಕೆಯ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ.
    ಈ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

    ತಮಿಳುನಾಡು ಡಿಜಿಪಿಯ ಪುತ್ರಿ ದೌದಿ ಜೀವಾಲ್‌ ಅವರನ್ನು ಬಳಸಿಕೊಂಡು ಪಾಕಿಸ್ತಾನದ ಐಎಸ್‌ಐ ನಡೆಸಿದೆ ಎನ್ನಲಾದ 2006ರ ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆಯೂ ಇಮೇಲ್‌ನಲ್ಲಿ ಉಲ್ಲೇಖಗಳಿವೆ. ಅಕ್ಟೋಬರ್ 25 ರಂದು ತಿರುಪತಿಯ ಎರಡು ಪ್ರಸಿದ್ಧ ಹೋಟೆಲ್‌ಗಳಿಗೆ ಬೆದರಿಕೆ ಇಮೇಲ್ ಕಳುಹಿಸಲಾದ ಘಟನೆಯ ಬೆನ್ನಲ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಬಾಂಬ್ ಬೆದರಿಕೆ ಬಂದಿದೆ. ಹಿಂದಿನ ಬೆದರಿಕೆಯಲ್ಲಿ ಜಾಫರ್ ಸಾದಿಕ್ ಮತ್ತು ಕೃತಿಗಾ ಉದಯನಿಧಿ ಹೆಸರು ಕೂಡ ಉಲ್ಲೇಖಿಸಲ್ಪಟ್ಟಿದ್ದು, ಇದಕ್ಕೆ ಕಾರಣವಾದ ವ್ಯಕ್ತಿಗಳು ತಮಿಳುನಾಡಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *