LATEST NEWS
ದೆಹಲಿ-ಟೊರೊಂಟೊ ಏರ್ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ನವದೆಹಲಿ: ದೆಹಲಿ-ಟೊರೊಂಟೊ ಏರ್ ಕೆನಡಾದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಬಂದ ಕಾರಣ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.
ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಡಿಐಎಎಲ್) ಕಚೇರಿಗೆ ಮಂಗಳವಾರ ರಾತ್ರಿ 10.50ರ ವೇಳೆಗೆ ದೆಹಲಿ-ಟೊರೊಂಟೊ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ಬಂದಿತ್ತು. ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಭದ್ರತಾ ಮಾನದಂಡದ ಅನುಸಾರವಾಗಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
You must be logged in to post a comment Login