KARNATAKA
ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

ನವದೆಹಲಿ: ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6E2211 ವಿಮಾನವು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 5 ಗಂಟೆ ಸುಮಾರಿಗೆ ಟೇಕ್ ಆಫ್ ಆಗಬೇಕಿತ್ತು. ತಕ್ಷಣವೇ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದ್ದು, ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಎಲ್ಲ ಪ್ರಯಾಣಿಕರನ್ನು ತುರ್ತು ದ್ವಾರದ ಮೂಲಕ ಇಳಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ಸ್ಪಷ್ಟತೆ ಇಲ್ಲ. ಕೆಲವರು ಪ್ರಯಾಣಿಕರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ, ವಾರಣಾಸಿಯಿಂದ ದೆಹಲಿ ವಿಮಾನ ವಿಳಂಬವಾಗಿದೆ ಎಂದು ದೂರಿದ್ದರು.
ಪ್ರಯಾಣಿಕರೊಬ್ಬರಿಗೆ ಉತ್ತರಿಸಿದ ಏರ್‌ಲೈನ್, ಈ ಅನುಭವಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ನಮ್ಮ ಪ್ರಯಾಣಿಕರ ಪ್ರಯಾಣದ ಯೋಜನೆಗಳಿಗೆ ಅಡ್ಡಿಪಡಿಸುವ ಉದ್ದೇಶ ಎಂದಿಗೂ ನಮ್ಮದಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ತಿಳಿಸಿದೆ.